ನೂರು ಕನಸು
ಕೊನೆಗೂ ಅಣ್ಣಾವ್ರನ್ನು ಭೇಟಿಯಾದೆ...
ನಾನಾಗ ತುಂಬಾ ಚಿಕ್ಕವಳು, ಅದು ಸಿನಿಮಾ ಅಂದರೆ ನನಗೆ ಏನೇನೂ ಗೊತ್ತಿರದಿದ್ದ ಕಾಲ. ಥಿಯೇಟರುಗಳಿಗೆ ಹೋಗಿ ಸಿನಿಮಾ ನೋಡ್ತಿದ್ದಿದ್ದು ತುಂಬಾ ಅಪರೂಪ. ಅಜ್ಜನ ಮನೆಗೆ ಹೋದಾಗ ಒಂದು ಸಲ ಅಜ್ಜ ನಮ್ಮನ್ನು ಸಿನಿಮಾ ನೋಡಲು ಕರೆದುಕೊಂಡು ಹೋದರು. ಪುತ್ತೂರಿನ ಸಿನಿಮಾ ಥಿಯೇಟರ್. ಸಿಪಾಯಿ ರಾಮು ಅನ್ನುವ ಆ ಚಿತ್ರದಲ್ಲಿ ನಟ-ನಟಿಯರು ಯಾರು, ಚಿತ್ರದ ಕಥೆ ಏನು, ಯಾವುದೂ ಅರ್ಥ ಮಾಡಿಕೊಳ್ಳಲು ಗೊತ್ತಾಗದಿದ್ದ ಪ್ರಾಯ ನನ್ನದು...
ಸಿನಿಮಾ ಥಿಯೇಟರಿನೊಳಗೆ ಹೋಗಿ ಕೂತು ಸ್ವಲ್ಪ ಹೊತ್ತಿನಲ್ಲಿಯೇ ಅಲ್ಲಿ
Categories: ಕನ್ನಡ ಪುಟಗಳು
ಇದು ಜೀವನ... :)
Categories: ಕನ್ನಡ ಪುಟಗಳು
28ರಲ್ಲಿ ಗುಂಪಿಗೆ ಸೇರದವರು..!
1998 ಅಥವಾ 1999ನೇ ಇಸವಿ. ನಾನು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಕಲಿಯುತ್ತಿದ್ದ ಕಾಲ. ರಜದಲ್ಲಿ ಇರಬೇಕು, ಸರಿಯಾಗಿ ನೆನಪಿಲ್ಲ, ಅಜ್ಜನ ಮನೆಗೆ ಒಂದು ಸಾರಿ ಹೋಗಿದ್ದೆ. ಅಲ್ಲಿ ಮಾವಂದಿರ ಮಕ್ಕಳೊಡನೆ ಮಾತಾಡುತ್ತಿದ್ದಾಗ ನಾನು ಜರ್ನಲಿಸಂ ಸೇರಲಿರುವುದನ್ನು, ಆಮೇಲೆ ನನಗೆ ಜರ್ನಲಿಸ್ಟ್ ಉದ್ಯೋಗ ಸಿಗಲಿರುವುದನ್ನು ತಿಳಿಸಿದೆ. ಆಗ ನನ್ನ ಪುಟ್ಟ ಭಾವ, 6-7 ವರ್ಷದ ಪ್ರಶಾಂತ, ’ಜರ್ನಲಿಸ್ಟಾ?’ ಎಂಬ ಉದ್ಗಾರ ತೆಗೆದ. ಯಾಕೋ ಎಂದು ಕೇಳಿದರೆ, ಸಿಕ್ಕಾಪಟ್ಟೆ ನಾಚಿಕೊಂಡ.
ಸ್ವಲ್ಪ ಒತ್ತಾಯ
Categories: ಕನ್ನಡ ಪುಟಗಳು
ಅಧರ್ಮ
ಕಾಸರಗೋಡಿನಲ್ಲಿ ಕೋಮು ಗಲಭೆ ಅನ್ನುವಾಗ ಮನಸ್ಸು ಅದ್ಯಾಕೋ ಹುಳಿ ಹುಳಿಯಾಗುತ್ತದೆ. ನಾನು ಹಲ ವರ್ಷಗಳ ಹಿಂದೆ ಭೌತಿಕವಾಗಿ ಮತ್ತು ಮಾನಸಿಕವಾಗಿ ಬಿಟ್ಟು ಬಂದ ನನ್ನ ಹುಟ್ಟೂರಿನಲ್ಲಿ ಇನ್ನೂ ಅದೇ ನಡೆಯುತ್ತಿದೆ ಎನ್ನುವ ಸತ್ಯ ಒಪ್ಪಿಕೊಳ್ಳಲು ಕಷ್ಟವಾಗುತ್ತದೆ.
++++++++++
ನಮ್ಮ ಊರಲ್ಲಿ ಇರುವುದು ೪೦-೫೦ ಮನೆಗಳು. ಹಲವಾರು ಹಿಂದು ಮನೆಗಳ ನಡುವೆ ಒಂದೇ ಒಂದು ಮುಸ್ಲಿಂ ಮನೆ ಇದೆ. ನಮ್ಮ ಊರಿನಿಂದ ಬೇರೆಲ್ಲಿ ಹೋಗಬೇಕಾದರೂ ಗುಡ್ಡ ಹತ್ತಿ ಇನ್ನೊಂದು ಸಣ್ಣ ಊರಿಗೆ ಇಳಿಯಬೇಕು, ೨೦ ನಿಮಿಷದ ನಡಿಗೆ.
Categories: ಕನ್ನಡ ಪುಟಗಳು
ಒಡೆದು ಬಿದ್ದ ಕೊಳಲು...
ಒಡೆದು ಬಿದ್ದ ಕೊಳಲು ನಾನು
ನಾದ ಬರದು ನನ್ನಲಿ
ವಿನೋದವಿರದು ನನ್ನಲಿ...
ಕಿವಿಯನೇಕೆ ತೆರೆಯುತಿರುವೆ
ಎದೆಯೊಳೇನ ಹುಡುಕುತಿರುವೆ
ದೊರೆಯದೇನು ನನ್ನಲಿ...
ದೊರೆಯದೇನು ನನ್ನಲಿ...
ದೊರೆಯದೇನು ನನ್ನಲಿ !
ನಲ್ಲೆ ಬಂದು ತುಟಿಗೆ ಕೊಳಲನೊತ್ತಿ ಉಸಿರ ಬಿಟ್ಟಳು...
ತನ್ನ ಒಲವಿನಿಂದ ದನಿಯ ಹರಿದು ಇಳಿಸಿ ಬಿಟ್ಟಳು...
ಬಣ್ಣ ಬಣ್ಣದೆಣಿಪ ಹಾರ ನಲ್ಲ ಚೆಲ್ಲಿ ಕೊಟ್ಟನು...
ಕೊಳಲು ಬೇಸರಾಯಿತೇನೊ
ಹೊಸ ಹಂಬಲವಾಯಿತೇನೊ
ಎದೆಯ ಗಾಯ ಮಾಯಿತೇನೊ
ಬಿಸುಟೆದ್ದಳು ಕೊಳಲನು...
ಒಡೆದು ಬಿದ್ದ ಕೊಳಲು ನಾನು
Categories: ಕನ್ನಡ ಪುಟಗಳು
ಚುನಾವಣೆ, ಮತ್ತು ಒಂದಿಷ್ಟು ಕೊರೆತಪುರಾಣ... :)
ಇದೇನಪ್ಪಾ ಇದ್ದಕ್ಕಿದ್ದಂತೆ ರಾಜಕೀಯದ ಬಗ್ಗೆ ಇಷ್ಟೊಂದು ಕೊರೆತ ಶುರುಮಾಡಿದಾಳಲ್ಲ ಅಂತ ಅನ್ಕೋಬೇಡಿ, ಇದರಷ್ಟು ಕಲರ್-ಫುಲ್ ವಿಷಯ ಇನ್ಯಾವುದೂ ಇಲ್ಲ!
++++++++++++++++
ಕನ್ನಡ ಟೀವಿ ಚಾನೆಲ್-ಗಳಲ್ಲಿ ಇತ್ತೀಚೆಗೆ ಬರ್ತಾ ಇರುವ ರಾಜಕೀಯ ಪಕ್ಷಗಳ ಜಾಹೀರಾತುಗಳನ್ನು ನೋಡ್ತಾ ಇದ್ರೆ ಮಜಾ ಅನ್ನಿಸುತ್ತದೆ. ಅಳಬೇಕೋ ನಗಬೇಕೋ ಗೊತ್ತಾಗುವುದಿಲ್ಲ.
ಕಾಂಗ್ರೆಸ್ ’20 ತಿಂಗಳುಗಳ ದುರಾಡಳಿತ’ದ ಬಗ್ಗೆ ತನ್ನ ಬೇಸರವನ್ನು ಒಂದು ಜಾಹೀರಾತಿನಲ್ಲಿ ಹೇಳಿಕೊಂಡರೆ, ಇನ್ನೊಂದು ಜಾಹೀರಾತಿನಲ್ಲಿ ತನ್ನ
Categories: ಕನ್ನಡ ಪುಟಗಳು
ಬೆಳಕಿಲ್ಲದ ದಾರಿಯಲ್ಲಿ...
ಸುತ್ತಲೆತ್ತಲೆತ್ತಲೂ ಬರಿಯ ಕತ್ತಲೇ ಕತ್ತಲು... ಅದರ ನಡುವೆಯೂ ಗುಡ್ಡ... ಬೆಟ್ಟ... ಕಾಡು... ಕತ್ತಲಲ್ಲಿ ತೂರಿದ ಕಣ್ಣುಗಳಿಗೆ ಅಸ್ಪಷ್ಟವಾಗಿ ಗೋಚರಿಸುತ್ತಿದೆ. ಒಳಗಣ್ಣು ಒಂಚೂರು ತೆರೆದು ಹೊರಗೆ ನೋಡಿದರೆ ಕಾಣುವುದು, ಕಣ್ಣು ಹಾಯುವಷ್ಟು ದೂರಕ್ಕೆ ಮತ್ತು ಅದರಿಂದಲೂ ಆಚೆಗೆ ಗುಡ್ಡಕ್ಕೆ ಹಾಸಿದ ಹಸಿರು ಮರಗಳ ಹಾಸು...
ಕಿಟಿಕಿಯ ಗಾಜು ಪೂರ್ತಿ ತೆರೆದು, ನೋಟ ಹೊರಗೆ ತೂರುತ್ತಾ ಹೊರಗಿನ ಶಬ್ದ ಜಗತ್ತಿಗೆ ಕಿವಿಯಾಗುತ್ತೇನೆ... ದಾರಿಯುದ್ದಕ್ಕೂ ಸಿಗುವ ಪುಟ್ಟ ಪುಟ್ಟ ತೊರೆಗಳ ಜುಳುಜುಳು...
Categories: ಕನ್ನಡ ಪುಟಗಳು
