N A M Ismail
ಮಳೆಯ ತಾರದ ಗುಡುಗು ಸಿಡಿಲು
ಮಂತ್ರಿಗಳು ಆಗೀಗ ಅಧಿಕಾರಿಗಳ ಬಗ್ಗೆ ಕಿಡಿಕಾರುವುದುಂಟು. ಸರಕಾರ ರೂಪಿಸಿರುವ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯದೇ ಇದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ಗುಡುಗುವುದು ಮಾಧ್ಯಮಗಳಲ್ಲೂ ಸುದ್ದಿಯಾಗುತ್ತದೆ. ಈ ಗುಡುಗು ಸಿಡಿಲುಗಳೆಲ್ಲವೂ ಮಳೆಯಾಗದೆ ಮುಗಿದು ಹೋಗುವುದು ನಮ್ಮ ನಿತ್ಯದ ಜಂಜಡಗಳಲ್ಲಿ ಮರೆತೂ ಹೋಗುತ್ತವೆ. ಮಂತ್ರಿ ಮಹೋದಯರ ಈ ಗುಡುಗಾಟಕ್ಕೆ ಮಳೆ ತರಿಸುವ ಶಕ್ತಿಯೇ ಇಲ್ಲ ಎಂಬುದು ವಾಸ್ತವ. ಲೋಕಾಯುಕ್ತ ಸಂಸ್ಥೆಯನ್ನು ನಮ್ಮ ಸರಕಾರಗಳು ನಡೆಸಿಕೊಳ್ಳುತ್ತಿರುವುದನ್ನು ನೋಡಿದರೆ ಎಲ್ಲವೂ ಅರ್ಥವಾಗುತ್ತದೆ.
read more »ಮಂತ್ರಿಗಳೆಂಬ ಅಭಿನವ ಫರೋಅಗಳು
ಇರಾನ್‌ನ ಖ್ಯಾತ ಚಿಂತಕ ಅಲೀ ಶರೀಅತಿ ಅವರು ತಮ್ಮ ಲೇಖನವೊಂದರಲ್ಲಿ ಈಜಿಪ್ಟ್‌ನ ಪಿರಾಮಿಡ್‌ಗಳನ್ನು ನೋಡಿದ ಅನುಭವವನ್ನು ಬರೆದಿದ್ದಾರೆ. ಪಿರಾಮಿಡ್‌ಗಳೆಂಬ ಅದ್ಭುತಗಳ ಬಗ್ಗೆ ಅಲ್ಲಿನ ಮಾರ್ಗದರ್ಶಿಯ ಮಾತುಗಳನ್ನು ತಮ್ಮದೇ ಶೈಲಿಯಲ್ಲಿ ದಾಖಲಿಸುತ್ತಾ ಹೋಗುವ ಅವರು ಪಿರಾಮಿಡ್ ನಿರ್ಮಾಣದ ಹಿಂದಿನ ಕ್ರೌರ್ಯವನ್ನು ವಿವರಿಸುತ್ತಾರೆ. ಕೈರೋದಲ್ಲಿರುವ ಆರು ದೊಡ್ಡ ಮತ್ತು ಮೂರು ಸಣ್ಣ ಪಿರಾಮಿಡ್‌ಗಳ ನಿರ್ಮಾಣಕ್ಕೆ ಬಳಕೆಯಾದದ್ದು ಸುಮಾರು ಎಂಟುನೂರು ದಶ ಲಕ್ಷ ಬೃಹತ್ ಗಾತ್ರದ ಕಲ್ಲುಗಳು. ಪಿರಾಮಿಡ್‌ಗಳನ್ನು ನಿರ್ಮಿಸಿದ ಸ್ಥಳದಿಂದ ಸುಮಾರು 980 ಮೈಲುಗಳ ದೂರದಿಂದ ಈ ಕಲ್ಲುಗಳನ್ನು ತರಲಾಯಿತು. ಪ್ರತಿಯೊಂದು ಕಲ್ಲು ಒಂದೂವರೆಯಿಂದ ಎರಡು ಟನ್‌ಗಳಷ್ಟು ಭಾರವಿದೆ. ಈಗಿನಂತೆ ಕಲ್ಲುಗಳನ್ನು ಎತ್ತಿಡಲು ಕ್ರೇನುಗಳಾಗಲೀ, ಸಾಗಿಸಲು ಯಾಂತ್ರೀಕೃತ ಟ್ರಕ್‌ಗಳಾಗಲೀ ಇಲ್ಲದ ಆ ದಿನಗಳಲ್ಲಿ ಗುಲಾಮರನ್ನು ಬಳಸಿಕೊಂಡೇ ಇವೆಲ್ಲವನ್ನೂ ಮಾಡಲಾಯಿತು.
ಕಲ್ಲುಗಳನ್ನು ತರುವ ಕೆಲಸದಲ್ಲೇ ಎಷ್ಟೋ ಮಂದಿ ಕಲ್ಲುಗಳಡಿಗೆ ಸಿಕ್ಕಿ ಮೃತಪಟ್ಟರು. ಕಲ್ಲುಗಳನ್ನು ಎತ್ತಿ ಇಟ್ಟು ಪಿರಾಮಿಡ್ ನಿರ್ಮಿಸುವ ಕ್ರಿಯೆಯಲ್ಲಿ ಸತ್ತವರು ಅದೆಷ್ಟು ಮಂದಿಯೋ. ಅವರನ್ನೆಲ್ಲಾ ಪಿರಾಮಿಡ್‌ಗಳ ಪಕ್ಕದಲ್ಲೇ ಇರುವ ಸಾಮೂಹಿಕ ಸಮಾಧಿಯಲ್ಲಿ ಹೂಳಲಾಯಿತು. ಪಿರಾಮಿಡ್‌ನ ಒಳಗಿರುವ ಮೃತ ಫರೋಅನ ಸೇವೆಗೆಂದು ಅವರನ್ನು ಪಿರಾಮಿಡ್‌ನ ಪಕ್ಕದಲ್ಲಿಯೇ ಸಮಾಧಿ ಮಾಡಲಾಯಿತಂತೆ. ಸತ್ತ ಮೇಲೂ ಅವರು ಜೀತ ವಿಮುಕ್ತರಾಗಲಿಲ್ಲ! read more »
'ಮುಂಡನ ಮಾಡಿಸಿಕೊಂಡ ಬದುಕು'
ಯುಪಿಎ ಸರಕಾರ ವಿಶ್ವಾಸ ಮತ ಯಾಚಿಸಲು ಕರೆದಿದ್ದ ಅಧಿವೇಶನದ ಎರಡನೆಯ ದಿನ ಮತದಾನ ನಡೆಯುವ ಸ್ವಲ್ಪ ಹೊತ್ತಿಗೆ ಮೊದಲು ಮೂವರು ಬಿಜೆಪಿ ಸಂಸದರು ನೋಟಿನ ಕಟ್ಟುಗಳನ್ನು ಲೋಕಸಭೆಯಲ್ಲಿ ಪ್ರದರ್ಶಿಸಿದರು. ಮತದಾನದಲ್ಲಿ ಪಾಲ್ಗೊಳ್ಳದಂತೆ ತಡೆಯಲು ಈ ಹಣದ ಆಮಿಷವನ್ನೊಡ್ಡಲಾಗಿತ್ತು ಎಂದು ಆರೋಪಿಸಿದರು. ದೇಶದ ಮೂಲೆ ಮೂಲೆಗಳಲ್ಲಿರುವವರೆಲ್ಲಾ ಟಿ.ವಿ.ಯಲ್ಲಿ ಈ ದೃಶ್ಯವನ್ನು ಕಂಡರು. ಸ್ಪೀಕರ್ ಸೋಮನಾಥ ಚಟರ್ಜಿ ಈ ಸಂಗತಿಯ ಕುರಿತ ತನಿಖೆಯ ಭರವಸೆಯನ್ನೂ ನೀಡಿದರು. ಯುಪಿಎ ವಿಶ್ವಾಸ ಮತವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಯಿತು.
ಈ ಎಲ್ಲಾ ಘಟನಾವಳಿಗಳ ನಂತರ ಎಲ್ಲಾ ಪಕ್ಷಗಳ ಮುಖಂಡರಂತೆ ಸಿಪಿಐ (ಎಂ)ನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಕೂಡಾ ಮಾಧ್ಯಮಗಳ ಜತೆ ಮಾತನಾಡಿದರು. ಅವರು ಹೇಳಿದ ಒಂದು ಮಾತು ಹೀಗೆ `ನಮ್ಮ ಮಿತ್ರ ಪಕ್ಷಗಳ ಹಲವು ಸದಸ್ಯರಿಗೆ ಲಂಚದ ಆಮಿಷವನ್ನೊಡ್ಡಲಾಗಿತ್ತು. ಆದರೆ ನಮ್ಮ ಪಕ್ಷದ ಸದಸ್ಯರಿಗೆ ಮಾತ್ರ ಇಂಥ ಆಮಿಷಗಳಿರಲಿಲ್ಲ. ಕಾರಣ ನಮ್ಮ ಪಕ್ಷದ ಸದಸ್ಯರನ್ನು ಖರೀದಿಸಲು ಸಾಧ್ಯವಿಲ್ಲ ಎಂಬುದು ಅವರಿಗೂ ಗೊತ್ತಿತ್ತು'. ಈ ಹೇಳಿಕೆಯನ್ನು ಅಹಂಕಾರದ ಹೇಳಿಕೆ ಎಂದು ಕೇಡರ್‌ಗಳಿಲ್ಲದ ಪಕ್ಷದ ನಾಯಕರು ಹೇಳಬಹುದಾದರೂ ಇದು ವಾಸ್ತವ ಎಂಬುದರಲ್ಲಿ ಎರಡು ಮಾತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಇಂಥ ಬದ್ಧತೆಗಳು ಅಗತ್ಯ ಎಂಬುದರಲ್ಲಿಯೂ ಸಂಶಯವಿಲ್ಲ. ತನ್ನ ಸದಸ್ಯರನ್ನು ಯಾರೂ ಖರೀದಿಸಲು ಸಾಧ್ಯವಿಲ್ಲ ಎಂಬ ನಂಬಿಕೆ ಇರುವ ಪಕ್ಷವೊಂದು ತನ್ನ ಹಿರಿಯ ಸದಸ್ಯನೊಬ್ಬ ಅಂತಃಸ್ಸಾಕ್ಷಿಗೂ, ದೇಶದ ಸಂವಿಧಾನಕ್ಕೂ ಬದ್ಧತೆಯನ್ನು ತೋರಿಸಿದಾಗ ಏಕೆ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬುದು ಮಾತ್ರ ಆಶ್ಚರ್ಯದ ವಿಷಯ. read more »
ಅಣುಶಕ್ತಿ: ರಾಜಕಾರಣಿಗಳು ಕೇಳದ ಪ್ರಶ್ನೆಗಳು
ಭಾರತ ಮತ್ತು ಅಮೆರಿಕದ ನಡುವಣ ಅಣು ಒಪ್ಪಂದ ದೇಶದ ವಿದ್ಯು್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಿಬಿಡುತ್ತದೆ. ಇದು ದೇಶಕ್ಕೆ ಒಳ್ಳೆಯದೆಂದು ಕಾಂಗ್ರೆ್ ಹೇಳುತ್ತಿದೆ. ಈ `ಒಳಿತಿನ' ನಂಬಿಕೆಯನ್ನಿಟ್ಟುಕೊಂಡು ಅದು ಸಂಸತ್ತಿನಲ್ಲಿ ವಿಶ್ವಾಸ ಮತ ಕೋರುತ್ತಿದೆ. ಭಾರತ ಮತ್ತು ಅಮೆರಿಕದ ನಡುವಣ ನಾಗರಿಕ ಅಣು ಒಪ್ಪಂದವನ್ನು ವಿರೋಧಿಸುತ್ತಿರುವ ಬಿಜೆಪಿ ಮತ್ತು ಎಡ ಪಕ್ಷಗಳೆರಡೂ ಅಣು ವಿದ್ಯುತ್ ನ ಒಳಿತನ್ನು ಅಲ್ಲಗಳೆಯುತ್ತಿಲ್ಲ. ಬಿಜೆಪಿಯಂತೂ ಅಮೆರಿಕದ ಜತೆಗೆ ಭಾರತ ವ್ಯೂಹಾತ್ಮಕ ಸಂಬಂಧವನ್ನು ಇಟ್ಟುಕೊಳ್ಳಬೇಕೆಂದೂ ವಾದಿಸುತ್ತಿದೆ. ಆದರೆ ಈ ಎರಡೂ ಪಕ್ಷಗಳು ಅಣು ಒಪ್ಪಂದವನ್ನು ವಿರೋಧಿಸುತ್ತಿವೆ. ಅವುಗಳು ನೀಡುವ ಕಾರಣ ಈ ಒಪ್ಪಂದ ಭಾರತದ ಸಾರ್ವಭೌಮತೆಯನ್ನು ಕಿತ್ತುಕೊಳ್ಳುವಂತಿದೆ. ಮಾತ್ರವ ಭಾರತವನ್ನು ಅಮೆರಿಕದ ಕಿರಿಯ ಪಾಲುದಾರನಾಗಿಸುವಂಥ ಒಪ್ಪಂದವಿದು.
ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಎಲ್ ಕೆ ಆಡ್ವಾಣಿಯವರಂತೂ ಅಣು ಒಪ್ಪಂದದ ಸುತ್ತ ಇರುವ ನಿಗೂಢತೆಯ ಬಗ್ಗೆ ಮಾತನಾಡಿದರು. ಒಪ್ಪಂದದ ಕರಡು, ಐಎಇಎ ಜತೆಗಿನ ಒಪ್ಪಂದ ಕರಡುಗಳನ್ನು ರಹಸ್ಯವಾಗಿಟ್ಟಿರುವುದನ್ನು ಪ್ರಶ್ನಿಸಿದರು. ಎಡ ಪಕ್ಷಗಳಂತೂ ಒಪ್ಪಂದದ ರಹಸ್ಯಾತ್ಮಕತೆಯ ಬಗ್ಗೆ ಆರಂಭದಿಂದಲೂ ಪ್ರಶ್ನೆಗಳನ್ನು ಎತ್ತುತ್ತಲೇ ಇವೆ. ಇದೇನು ಯುಪಿಎ ಸರಕಾರ ವಿಶೇಷವಾಗಿ ರೂಢಿಸಿಕೊಂಡ ರಹಸ್ಯಾತ್ಮಕತೆಯಲ್ಲ. ಅಣುಶಕ್ತಿಗೆ ಸಂಬಂಧಿಸಿದ ಎಲ್ಲವೂ ಭಾರತದಲ್ಲಿ ರಹಸ್ಯವೇ. ಇದಕ್ಕೆ ಅಗತ್ಯವಿರುವ ಕಾನೂನುಗಳನ್ನೂ ನಮ್ಮ ಸಂಸದರೇ ರೂಪಿಸಿ ಜಾರಿಗೆ ತಂದಿದ್ದಾರೆ.
ಈಗ ಅಣು ಒಪ್ಪಂದವನ್ನು ವಿರೋಧಿಸುತ್ತಿರುವ ಎಡ ಮತ್ತು ಬಲ ಪಕ್ಷಗಳಿಗೆ ಒಪ್ಪಂದದ ಕರಡುಗಳನ್ನು `ಕ್ಲಾಸಿಫೈಡ್' ಎಂದು ಕರೆಯುತ್ತಿರುವುದು ಮಾತ್ರ ಒಂದು ಸಮಸ್ಯೆಯಂತೆ ತೋರುತ್ತಿದೆಯೇ ಹೊರತು ಅಣುಶಕ್ತಿಗೆ ಸಂಬಂಧಿಸಿದ ಖರ್ಚು ವೆಚ್ಚಗಳ ಬಗ್ಗೆ, ಅಣುಶಕ್ತಿ ರಿಯಾಕ್ಟರುಗಳ ಕಾರ್ಯನಿರ್ವಹಣೆಯ ಬಗ್ಗೆ, ವಿಕಿರಣ ಸೋರಿಕೆಗಳ ಬಗ್ಗೆ ಇಲ್ಲಿಯ ತನಕವೂ ಸಂಸತ್ತಿನಲ್ಲಿ ಚರ್ಚೆ ನಡೆದಿಲ್ಲ. ಮಾಧ್ಯಮಗಳು ಈ ವಿಷಯವನ್ನು ಕೆದಕಿದಾಗಲೆಲ್ಲಾ ಅಧಿಕೃತ ರಹಸ್ಯ ಕಾಯ್ದೆಯ ಬೆಂಬಲ ಪಡೆದು ಎಲ್ಲವನ್ನೂ ಮುಚ್ಚಿಡಲಾಗುತ್ತದೆ. ಅಣು ಒಪ್ಪಂದದ ಕುರಿತ ಬಿಸಿಯೇರಿದ ಚರ್ಚೆಗಳಲ್ಲಿ ಈ ವಿಷಯವನ್ನು ಯಾರೂ ಪ್ರಸ್ತಾಪಿಸಲಿಲ್ಲ. read more »
